Breaking News

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಲೈಂಗಿಕ ದೌರ್ಜನ್ಯ.!

ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ ನವಲಗುಂದ ತಾಲೂಕಿನಲ್ಲಿ ನಡೆದಿದೆ. ಬುಧವಾರ (ಮಾರ್ಚ್‌ 18ರಂದು) ಸಂಜೆ 4:30 ಸುಮಾರಿಗೆ ಮುಖ್ಯಶಿಕ್ಷಕ ಬಾಲಕಿಯನ್ನು ತನ್ನ ಕಚೇರಿ ಸಮೀಪದ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ ವರ್ತನೆಯಿಂದ ಗಾಬರಿಗೊಂಡ ಬಾಲಕಿ ತನ್ನ ಪೋಷಕರ ಬಳಿ ನಡೆದ ಘಟನೆಯನ್ನು ಹೇಳಿಕೊಂಡಿದ್ದಾಳೆ. ಈ ಸಂಬಂಧ ಬಾಲಕಿಯ ತಾಯಿ ನವಲಗುಂದ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *