Breaking News

ಕೋರ್ಟ್ ಗೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್

ಧಾರವಾಡ: ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಧಾರವಾದ ಪಾಲಿಕೆ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ ಜಮನಾಳ ಬಂಧಿತ ಆರೋಪಿ. ಧಾರವಾಡ ಉಪನಗರ ಠಾಣೆ ಪೊಲೀಸರು ಶ್ರೀಕಾಂತ್ ನನ್ನು ಬಂಧಿಸಿದ್ದಾರೆ. ಈತ ಸಿಜೆ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯದಿಂದ ಶಿಕ್ಷಕೆಗೆ ಗುರಿಯಾಗಿ ಜಾಮೀನು ಪಡೆದುಕೊಂಡಿದ್ದ. ಬಳಿಕ ಕೋರ್ಟ್ ಗೆ ಹಾಜರಾಗದೇ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈ ಹಿಂದೆ ಜೆಡಿಎಸ್ ನಲ್ಲಿ ಗುರುತಿಸಿಕೊಂಡು ಮಹಾನಗರ ಪಾಲಿಕೆ ಸದಸ್ಯನಾಗಿದ್ದ. ಸದ್ಯ ಶೀಕಾಂತ್ ನನ್ನು ಧಾರವಾಡ ನಗರದ ಹೊರವಲಯದಲ್ಲಿ ಬಂಧಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *