Breaking News

ಬಾಲಕನಿಗೆ ಹಲ್ಲೆ ; ಪ್ರಕರಣ ದಾಖಲು

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾತ್ರೆಗೆ ಹುಡುಗಿಯರೊಂದಿಗೆ ಆಗಮಿಸಿದ್ದಾನೆ ಎಂದು ಆರೋಪಿಸಿ ಅನ್ಯ ಧರ್ಮದ ಅಪ್ರಾಪ್ತ ವಯಸ್ಕ ಬಾಲಕನಿಗೆ ಹಲ್ಲೆ ನಡೆಸಿದ ಕುರಿತು ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಮಾ. 11ರಂದು ಖಾಸಗಿ ವಿದ್ಯಾಸಂಸ್ಥೆಯ 17ರ ಹರೆಯದ ವಿದ್ಯಾರ್ಥಿ ಜಾತ್ರೆಗೆ ಹೋಗಿದ್ದ ವೇಳೆ ಸ್ಥಳದಲ್ಲಿದ್ದ ಕೆಲವರು ತಮ್ಮ ಧರ್ಮದ ಹುಡುಗಿಯರೊಂದಿಗೆ ಅನ್ಯ ಧರ್ಮದ ಬಾಲಕ ಜಾತ್ರೆಗೆ ಬಂದಿದ್ದಾನೆ ಎಂದು ಆಕ್ಷೇಪಿಸಿ ಆತನಿಗೆ ಹಲ್ಲೆ ನಡೆಸಿ ನಿಂದಿಸಿದ್ದಾರೆ. ಜತೆಗೆ ಆತನನ್ನು ಅಲ್ಲಿಂದ ಬೈಕಿನಲ್ಲಿ ದೂರ ಕರೆ ತಂದು ಹಲ್ಲೆ ನಡೆಸಿ, ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಕಳುಹಿಸಿದ್ದಾರೆ. ಘಟನೆಯ ಬಳಿಕ ಬಾಲಕನು ಭಯಭೀತನಾಗಿದ್ದಾನೆ ಎಂದು ಆರೋಪಿಸಿ ಆತನ ತಂದೆ ಮಾ. 18ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *