Breaking News

ಬೆಂಗಳೂರು | ಬ್ಯಾಟರಿ ಕಳ್ಳತನ: ಆರೋಪಿ ವಶ

ಯುಪಿಎಸ್‌ ಬ್ಯಾಟರಿಗಳನ್ನು ಕಳ್ಳ‌ತನ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ₹4 ಲಕ್ಷ ಮೌಲ್ಯದ 51 ವಿವಿಧ ಕಂಪನಿಯ ಬ್ಯಾಟರಿಗಳು ಹಾಗೂ ಒಂದು ಆಟೊರಿಕ್ಷಾ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು. ಎಲೆಕ್ಟ್ರಾನಿಕ್‌ ಸಿಟಿಯ ಖಾಸಗಿ ಕಂಪನಿಯ ವ್ಯವಸ್ಥಾಪಕರೊಬ್ಬರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಶಾಂತಿಪುರ ಮುಖ್ಯರಸ್ತೆ ಸೇರಿದಂತೆ ವಿವಿಧೆಡೆ ಬ್ಯಾಟರಿಗಳನ್ನು ಆರೋಪಿ ಕಳ್ಳತನ ಮಾಡಿದ್ದ. ಕೊಪ್ಪ-ಬೇಗೂರು ಮುಖ್ಯರಸ್ತೆಯ ವಡ್ಡರಪಾಳ್ಯದಲ್ಲಿ ಇರುವ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *