Breaking News

ಬೆಂಗಳೂರಲ್ಲಿ ಹೈಟೆಕ್ ಕಾರ್ ಡ್ರಿಫ್ಟಿಂಗ್ : ಅಪರಿಚಿತ ಚಾಲಕನ ವಿರುದ್ಧ FIR ದಾಖಲು

ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಬೆಳಗಿನಜಾವ ಐಷಾರಾಮಿ ಲಾಂಬೊರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿ ಅಪಾಯಕಾರಿ ಚಾಲನೆ ಮಾಡಿದ್ದು, ಈ ಸಂಬಂಧ ಅಪರಿಚಿತ ಕಾರು ಚಾಲಕನ ವಿರುದ್ಧ ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಂದು ಬೆಳಗಿನಜಾವ 2 ಗಂಟೆ ಸುಮಾರಿಗೆ ಲಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ವೃತ್ತದ ಬಳಿ ಬಂದಿತ್ತು. ಈ ವೇಳೆ ಕಾರು ಡ್ರಿಫ್ಟಿಂಗ್ ಮಾಡಿದೆ. ಇದನ್ನು ಕಂಡು ಸ್ಥಳೀಯರು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮಾಹಿತಿ ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಪರಿಶೀಲನೆ ವೇಳೆ KA-05 NR 0009 ನಂಬರ್​​ನ ಲ್ಯಾಂಬೋರ್ಗಿನಿ ಕಾರು ಎಂಬುದು ಗೊತ್ತಾಗಿದೆ. ಕಾರಿನ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದ್ದು, ಅಜಾಗರೂಕತೆ ಹಾಗೂ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *