Breaking News

ದಾವಣಗೆರೆ | ಚುನಾವಣಾ ಕರ್ತವ್ಯಕ್ಕೆ ಗೈರು: ಉಪನ್ಯಾಸಕ ಅಮಾನತು

ಚುನಾವಣಾ ತರಬೇತಿಗೆ ಗೈರು ಹಾಜರಾಗಿದ್ದ ಹರಿಹರದ ಎಸ್‌ಜೆವಿಪಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಕೆ.ಎಂ. ರುದ್ರಮುನಿಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮತಗಟ್ಟೆ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದ ರುದ್ರಮುನಿಸ್ವಾಮಿ ಸೇರಿದಂತೆ 210 ಉಪನ್ಯಾಸಕರಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಾರ್ಚ್‌ 19ರಂದು ತರಬೇತಿ ಹಮ್ಮಿಕೊಳ್ಳಲಾಗಿತ್ತು. ‘ತರಬೇತಿಗೆ ಹಾಜರಾಗುವಂತೆ ನೀಡಿದ ಸೂಚನೆಯನ್ನು ಉಪೇಕ್ಷಿಸಲಾಗಿದೆ. ಪೂರ್ವಾನುಮತಿ ಪಡೆಯದೇ ತರಬೇತಿಗೆ ಗೈರಾಗಿದ್ದಾರೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ’ ಎಂದು ಗಂಗಾಧರಸ್ವಾಮಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *