Breaking News

ಡಿಆರ್ ಐ ಭರ್ಜರಿ ಬೇಟೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಡಿಆರ್ ಐ ಭರ್ಜರಿ ಕಾರ್ಯಾಚರಣೆ ನಡೆಸಿದೆ. ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಡ್ರಗ್ಸ್ ಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಖಚಿತ ಮಾಅಹಿತಿ ಮೇರೆಗೆ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದು, ಕಾರ್ಯಪ್ರವೃತ್ತರಾಗಿ ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಕೂಡ ಅಧಿಕಾರಿಗಳು ಅರೆಸ್ಟ್​​ ಮಾಡಿದ್ದಾರೆ. ಬಂಧಿತ ಆರೋಪಿಯ ಬೆಂಗಳೂರಿನ ಮನೆಯಲ್ಲಿ ಶೋಧ ನಡೆಸಿದಾಗ 40 ಡೆಬಿಟ್ ಕಾರ್ಡ್‌ಗಳು ಮತ್ತು 70ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ. ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *