Breaking News

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಇಂದು ಮುಂಜಾನೆ ಈ ಒಂದು ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ತಲೆಯ ಮೇಲೆ ಹಲ್ಲೆ ನಡೆಸಿ ಕಿರಣ್ (25) ಎನ್ನುವ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆಕೊಲೆಯಾದ ಕಿರಣ್ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದ ಎನ್ನಲಾಗಿದೆ. ಇಂದು ಮುಂಜಾನೆ ಕಿರಣನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾಮಮೂರ್ತಿ ನಗರದ ಟಿಸಿ ಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಒಂದು ಕೊಲೆ ನಡೆದಿದೆ.ಘಟನಾ ಸ್ಥಳಕ್ಕೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *