Breaking News

ಚಾರ್ಮಾಡಿ ಘಾಟನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ ವಾಹನ : ಓರ್ವ ಸಾವು, 9 ಜನರಿಗೆ ಗಾಯ!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಒಂದು ಪಾರ್ಟಿಯಾಗಿದೆ 9 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಶೇಖರಪ್ಪ (59) ಎಂಬವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *