ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ಬೆಳ್ತಂಗಡಿ ಮೂಲದ ಯುವತಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2025ರಲ್ಲಿ ಯುವತಿಯು ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಳು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೋಮು ಪ್ರಚೋದನೆಯ ಪೋಸ್ಟ್‌ಗಳನ್ನು ಈಕೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಮಾ.19ರಂದು ಆಕೆಯನ್ನು ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

