ಬೆಂಗಳೂರು: ಬೇಗೂರು ಬಳಿಯ ಆರ್ .ಸಿ ಲೇಔಟ್‌ನ ವಿಶ್ವಪ್ರಿಯ ಅಪಾರ್ಟ್‌ಮೆಂಟ್‌ನ ಆವರಣದಲ್ಲಿದ್ದ ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಳ್ಳರು ಕದೊಯ್ದಿದ್ದಾರೆ. ಹೆಲ್ಮೆಟ್ ಧರಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು, ಅಪಾಟ್ ìಮೆಂಟ್ ಒಳಗೆ ಬಂದು 2 ಸಿಲಿಂಡರ್ ಗಳನ್ನು ಕಳವು ಮಾಡಲಾಗಿದೆ. ಬಳಿಕ ಅಪಾರ್ಟ್‌ಮೆಂಟ್ ನಿವಾಸಿಯೊಬ್ಬರು ಗಮನಿಸಿ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ, ದ್ವಿಚಕ್ರ ವಾಹನದಲ್ಲಿ ಬಂದ ಒಬ್ಬ ಹೊರಗೆ ನಿಂತಿದ್ದ. ಮತ್ತೂಬ್ಬ ದ್ವಿಚಕ್ರ ವಾಹನ ಸಮೇತ ಒಳಗೆ ಹೋಗಿ ಎರಡು ಸಿಲಿಂಡರ್‌ಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗಿ ಪರಾರಿಯಾಗಿದ್ದಾರೆ. ಈ ಸಂಬಂಧ ಅಪಾರ್ಟ್‌ಮೆಂಟ್‌ನ ಮಾಲೀಕರು ದೂರು ನೀಡಿದ್ದು, ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

