Breaking News

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ: ಎಂಡಿಎಂಎ ಮಾತ್ರೆ, ಗಾಂಜಾ ವಶ

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು, ₹52 ಸಾವಿರ ಮೌಲ್ಯದ 14 ಗ್ರಾಂ ಎಂಡಿಎಂಎ ಮಾತ್ರೆ ಹಾಗೂ 94 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೆ.ಆರ್.ಪುರ ರೈಲ್ವೆ ನಿಲ್ದಾಣದ ಸಮೀಪ ಪೊಲೀಸರು ದಾಳಿ ಮಾಡಿ, ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದರು. ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಡ್ರಗ್ಸ್‌ ಎಲ್ಲಿಂದ ಪೂರೈಕೆ ಆಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *