Breaking News

ಬೆಳ್ಮ: 10.6 ಗ್ರಾಂ ಎಂಡಿಎಂಎ ಸಹಿತ 1.06 ಲ. ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ಬೆಳ್ಮ ಗ್ರಾಮದ ಫೀಝಾ ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ಝಾಕಿರ್ ಹುಸೇನ್ (19)ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಆತನಿಂದ 1.06 ಲಕ್ಷ ರೂ.ಮೌಲ್ಯದ 10.6 ಗ್ರಾಂ ತೂಕದ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಯಂತ್ರ, ಸ್ಮೋಕ್ ಟ್ಯೂಬ್, ಸಿರಿಂಜ್, ಸಿಗರ್ ಲೈಟ್, ನಂಬರ್ ಪ್ಲೇಟ್ ಇಲ್ಲದ ಬೈಕ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *