Breaking News

ಗಾಂಜಾ ಸೇವನೆ; ವ್ಯಕ್ತಿ ಬಂಧನ

ಭಟ್ಕಳ: ತಾಲೂಕಿನ ವೆಂಕಟಾಪುರದ ಸಾರ್ವಜನಿಕ ರಸ್ತೆಯಲ್ಲಿ ಶನಿವಾರ (ಮಾ.21) ರಾತ್ರಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೊನ್ನಾವರ ತಾಲೂಕಿನ ನಾಕುದಾ ಮೊಹಲ್ಲಾ ನಿವಾಸಿ ಅಲಿ ಅಕ್ಬರ ಅಬ್ದುಲ್ ಖಾದೀರ (31) ಎಂದು ಗುರುತಿಸಲಾಗಿದೆ. ಈತನು ಶನಿವಾರ ರಾತ್ರಿ ವೆಂಕಟಾಪುರದ ಸಾರ್ವಜನಿಕ ರಸ್ತೆಯಲ್ಲಿ ತೂರಾಡುತ್ತಾ ಇರುವ ಕುರಿತು ಖಚಿತ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಆತ ತಾನು ಗಾಂಜಾ ಸೇವಿಸಿರುವುದರ ಕುರಿತು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆ ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದ್ದು, ಗಾಂಜಾ ಸೇವನೆ ಮಾಡಿರುವುದು ದೃಢ ಪಟ್ಟಿದೆ. ಹಾಗಾಗಿ ಆತನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *