ಬೀದರ್ : ಇತ್ತೀಚಿನ ದಿನಗಳಲ್ಲಿ ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪೂರೈಕೆ ಅಡಚಣೆಯಿಂದ ಅನೇಕ ಹೋಟೆಲ್ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಈ ಪರಿಸ್ಥಿತಿಯನ್ನೇ ದುರುಪಯೋಗಪಡಿಸಿಕೊಂಡ ಕಳ್ಳರು ಹಗಲಲ್ಲೇ ಸಿಲಿಂಡರ್ ಕಳವು ಮಾಡುತ್ತಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆಮನೆಯ ಬೀಗ ಮುರಿದು 6 ಸಿಲಿಂಡರ್ಗಳನ್ನು ಅಪಹರಿಸಲಾಗಿದೆ. ಅಡುಗೆಗಾಗಿ ಸಂಗ್ರಹಿಸಿದ್ದ ಸಿಲಿಂಡರ್ಗಳನ್ನು ಕಳ್ಳರು ಹೊತ್ತೊಯ್ದಿರುವುದರಿಂದ ಶಾಲೆಯ ಬಿಸಿಯೂಟ ವ್ಯವಸ್ಥೆಗೆ ತೊಂದರೆ ಉಂಟಾಗಿದೆ. ಈ ಪ್ರಕರಣವನ್ನು ಬಸವಕಲ್ಯಾಣ ಗ್ರಾಮಾಂತರ ಠಾಣೆಯಲ್ಲಿ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

