Breaking News

ಬೆಂಗಳೂರಿನಲ್ಲಿ ೯ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು ನಗರದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು ೯ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಾಯಿಗಳ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ ರಾಜಧಾನಿ ಎಕ್ಸ್‌ಪ್ರೆಸ್ ಮೂಲಕ ದೆಹಲಿಯಿಂದ ಬೆಂಗಳೂರಿಗೆ ಈ ಮಾದಕ ವಸ್ತುಗಳನ್ನು ತರುತ್ತಿದ್ದಾಗ ಈ ಕ್ರಮ ಕೈಗೊಳ್ಳಲಾಗಿದೆ. ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಮುಖ್ಯ ಆರೋಪಿ ಸೇರಿದಂತೆ ಆತನ ಸಂಪರ್ಕದಲ್ಲಿದ್ದ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆರೋಪಿಯ ಮನೆಯಿಂದ ೭೦ ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *