ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ Cubbon Park ಟ್ರಾಫಿಕ್ ಪೊಲೀಸರು ನೋಟಿಸ್ ನೀಡಿದ್ದಾರೆ. ಶನಿವಾರ ಮುಂಜಾನೆ ಸುಮಾರು 2:30ರ ವೇಳೆಗೆ ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ರಿಕ್ಕಿ ರೈ “ನಾನು ಕಾರು ಚಾಲನೆ ಮಾಡಿಲ್ಲ” ಎಂದು ಹೇಳಿದ್ದರು. ಆದರೆ Anil Kumble Circle ಸಮೀಪದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಕಾರನ್ನು ರಿಕ್ಕಿ ರೈವೇ ಚಲಾಯಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಲ್ಯಾಂಬೋರ್ಗಿನಿ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ರಿಕ್ಕಿ ರೈಗೆ ನೋಟಿಸ್ ಜಾರಿಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

