ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ ವಿಜಯಪುರ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹1.15 ಲಕ್ಷ ದಂಡ ವಿಧಿಸಿದೆ. ಬಬಲೇಶ್ವರ ಠಾಣೆ ವ್ಯಾಪ್ತಿಯ ಕಾತ್ರಾಳ ಗ್ರಾಮದ ಹಣಮಂತ ಭೀಮಪ್ಪ ಕೊಕಟನೂರ ಎಂಬಾತ 2025ರ ಜುಲೈ 25ರಂದು, ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಬಾಲಕಿಯೊಬ್ಬಳಿಗೆ ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ, ಬೈಕಿನಲ್ಲಿ ಊರಿನ ಹೊರವಲಯದ ಹೊಲವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ಕುರಿತು ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಜಯಪುರ ಗ್ರಾಮೀಣ ವೃತ್ತದ ಸಿಪಿಐ ರಮೇಶ ಅವಜಿ ಅವರು ಪ್ರಕರಣದ ತನಿಖೆ ಮಾಡಿ, ಸಾಕ್ಷಿ ಪುರಾವೆಗಳನ್ನು ಸಂಗ್ರಹಿಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿ.ಜಿ.ಹಗರಗುಂಡ ವಕಾಲತ್ತು ವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

