ಮಲ್ಪೆ: ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪಡುತೋನ್ಸೆ ಕೋಡಿಬೆಂಗ್ರೆಯ ಜುಬೇರ್ (42)ಎಂಬಾತನನ್ನು ಮಲ್ಪೆ ಪೊಲೀಸರು ಮಾ. 22ರಂದು ಬೆಂಗಳೂರಿನ ಶಿವಾಜಿ ನಗರದಲ್ಲಿ ಬಂಧಿಸಿದ್ದಾರೆ. 2011ರಲ್ಲಿ ಕಲ್ಯಾಣಪುರ ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ಬ್ಯಾಂಕಿಗೆ ವಂಚಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈತ ದೀರ್ಘ ಕಾಲ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ಉಡುಪಿ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ಠಾಣೆ ಉಪನಿರೀಕ್ಷಕ ಅನಿಲ್ ಕುಮಾರ್ ಡಿ. ಅವರ ನೇತೃತ್ವದಲ್ಲಿ ಹೆಡ್ ಕಾನ್‌ಸ್ಟೆಬಲ್‌ಗಳಾದ ಸುರೇಶ್ ಕುಮಾರ್, ವಿಶ್ವನಾಥ್, ಭಾಸ್ಕರ್ ಹಾಗೂ ಕುಬೇರ ಅವರ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿಯನ್ನು ಮಾ. 23ರಂದುನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

