ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಉತ್ತರ ನೀಡಲು ನಿರ್ದೇಶನ ನೀಡಿರುವುದನ್ನು ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯು) ರಾಜ್ಯ ಸಮಿತಿ ಸ್ವಾಗತಿಸಿದೆ. ಬಾಲಕಿ ಸೌಜನ್ಯ ಪ್ರಕರಣದ ಮರುತನಿಖೆಗೆ ಕೋರಿ ಆಕೆಯ ತಾಯಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ ನಿರ್ದೇಶನ ನೀಡಿರುವುದು ಕಗ್ಗತ್ತಲಲ್ಲಿರುವ ನಮಗೆ ಕೊಂಚ ಬೆಳಕಿನ ಆಶಾಕಿರಣ ಮೂಡಿಸಿದೆ. ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಉತ್ತರ ನೀಡುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮರುತನಿಖೆಯಿಂದ ಹಿಂದೆ ಸರಿಯಬಾರದು ಹಾಗೂ ಸಾಕ್ಷ್ಯಗಳಿಲ್ಲ ಎಂಬಂತಹ ಸುಳ್ಳು ನೆಪಗಳನ್ನು ನೀಡಬಾರದು ಎಂದು ಎನ್‌ಎಫ್‌ಐಡಬ್ಲ್ಯು ಅಧ್ಯಕ್ಷೆ ಎ.ಜ್ಯೋತಿ ತಿಳಿಸಿದ್ದಾರೆ. ಎಸ್‌ಐಟಿ ಎಲ್ಲಾ ರೀತಿಯ ಸಹಕಾರ ನೀಡಿ, ನೊಂದ ಮಹಿಳೆಯರಿಗೆ ಮತ್ತು ಅಮಾಯಕರಿಗೆ ನ್ಯಾಯ ಒದಗಿಸಬೇ ಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

