Breaking News

ಮಸೀದಿ ವಿಚಾರದಲ್ಲಿ ತಕರಾರು – ದೊಣ್ಣೆ , ತಲವಾರು ಹಿಡಿದು ಬಡಿದಾಟ!

ಮಂಗಳೂರು : ಮಸೀದಿ ವಿಚಾರಕ್ಕೆ ಎರಡು ಗುಂಪುಗಳು ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಸಮೀಪದ ಉಳ್ಳಾಲದ ಸಜಿಪ ಪಡು ತಲೆಮೊಗರು ಗಾಮದಲ್ಲಿ ಈ ಘಟನೆ ನಡೆದಿದ್ದು, ಮಸೀದಿ ಬಳಿ ಎರಡು ಗುಂಪುಗಳ ನಡುವಿನ ತಗಾದೆ ಜಗಳದಲ್ಲಿ ಕೊನೆಗೊಂಡಿದ್ದು ಈ ಘಟನೆಯ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ ನಲ್ಲಿ ಸೆರೆಯಾಗಿದೆ.ಮಸೀದಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಭಿನ್ನಾಭಿಪ್ರಾಯ ನಡೆಯುತ್ತಿತ್ತು. ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾಗ ತಕರಾರು ಉಂಟಾದ ಪರಿಣಾಮ ಹಲವರು ತಲವಾರು, ದೊಣ್ಣೆ ಹಾಗೂ ಕಬ್ಬಿಣದ ರಾಡ್‌ಗಳನ್ನು ಬಳಸಿಕೊಂಡು ಪರಸ್ಪರರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ಸೇರಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಪೊಲೀಸರು BNS ಮತ್ತು Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *