Breaking News

ಹುಬ್ಬಳ್ಳಿ–ಧಾರವಾಡದಲ್ಲಿ ಅಪರಾಧಿಗಳಿಗೆ ಗಟ್ಟಿ ಎಚ್ಚರಿಕೆ – ಹೊಸ ಡಿಸಿಪಿ ಎಂಟ್ರಿ…

ಅಪರಾಧಿಗಳಿಗೆ ನಡುಕ ಶುರು – ಹೊಸ ಡಿಸಿಪಿ ಕಠಿಣ ಎಂಟ್ರಿ..

ಕಾನೂನು ಉಲ್ಲಂಘನೆ ಮಾಡಿದ್ರೆ ಗತಿ ಗಂಡಾಂತರ – ಡಿಸಿಪಿ ಕಠಿಣ ವಾರ್ನಿಂಗ್

ನಗರದಲ್ಲಿ ಕ್ರೈಂಗೆ ಬ್ರೇಕ್ ಹಾಕಲು IPS ಶೃತಿ ಎಂ.ಎಸ್ ಮಾಸ್ಟರ್ ಪ್ಲಾನ್..

ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪಪೊಲೀಸ್ ಆಯುಕ್ತರಾಗಿ IPS ಶೃತಿ ಎಂ.ಎಸ್., ಅವರು ಇಂದು ಅಧಿಕಾರ ವಹಿಸಿಕೊಂಡರು…

ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಹೊತ್ತಿರುವ ಅವರು, ಅಪರಾಧ ನಿಯಂತ್ರಣಕ್ಕೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವುದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವುದು ತಮ್ಮ ಮುಖ್ಯ ಗುರಿಯಾಗಿದೆ ಎಂದು ಹೇಳಿದ್ದಾರೆ…

ಇನ್ನು ಮುಂದೆ ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಿ, ಸಾರ್ವಜನಿಕರೊಂದಿಗೆ ಉತ್ತಮ ಸಂವಹನ ನಡೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Share News

About Shaikh BigTv

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *