Breaking News

ಆಸ್ತಿ ವೈಷಮ್ಯಕ್ಕೆ ರಕ್ತಪಾತ: 16 ವರ್ಷದ ಅಪ್ರಾಪ್ತನಿಂದ ಕೊಲೆ!

ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಆಸ್ತಿ ವೈಷಮ್ಯ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ವೀರಭದ್ರಪ್ಪ (55) ಎಂದು ಗುರುತಿಸಲಾಗಿದೆ. ಕುಟುಂಬಗಳ ನಡುವಿನ ಆಸ್ತಿ ವಿವಾದವೇ ಈ ಕೊಲೆಗೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.ಈ ಕೃತ್ಯವನ್ನು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ನಡೆಸಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ದೊಡ್ಡಾಲಘಟ್ಟದಿಂದ ಜಮೀನಿಗೆ ತೆರಳುವ ರಸ್ತೆಯಲ್ಲಿ ವೀರಭದ್ರಪ್ಪ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಭರಮಸಾಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಅಪ್ರಾಪ್ತ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಿಸಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *