ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ರಾಷ್ಟ್ರ ರಕ್ಷಣಾ ಪಡೆ ಮುಖ್ಯಸ್ಥ ಪುನೀತ್ ಕೆರೆಹಳ್ಳಿ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಕೆಲವು ದಿನಗಳ ಹಿಂದೆ ಪುನೀತ್ ಕೆರೆಹಳ್ಳಿ ನಗರದಲ್ಲಿ ವಾಸವಾಗಿರುವ ಅಕ್ರಮ ಬಾಂಗ್ಲಾ ನಿವಾಸಿಗಳ ಮನೆಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಇದು ಪೊಲೀಸ್ ನೈತಿಕಗಿರಿ ಎಂದು ಬೈರಪ್ಪ ಹರೀಶ್ ಕುಮಾರ್ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಬೈರಪ್ಪ ಹರೀಶ್ ಕುಮಾರ್ ಗೆ ಅವಾಚ್ಯ ಪದಗಳಿಂದ ನಿಂದಿಸಿ ಪುನೀತ್ ಕೆರೆಹಳ್ಳಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

