Breaking News

ಮುಳಬಾಗಿಲಲ್ಲಿ ದಾರುಣ ದುರಂತ: ಮನೆ ಕುಸಿದು 15ರ ಬಾಲಕಿ ಸಾವು, ನಾಲ್ವರಿಗೆ ಗಂಭೀರ ಗಾಯ

ಕೋಲಾರ: ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮುಳಬಾಗಿಲು ನಗರದಲ್ಲಿ ಹಳೆಯ ಮನೆ ಏಕಾಏಕಿ ಕುಸಿದು ಬಿದ್ದ ಪರಿಣಾಮ 15 ವರ್ಷದ ಬಾಲಕಿ ದುರ್ಘಟನೆಯಲ್ಲಿ ಮೃತಪಟ್ಟಿದ್ದಾಳೆ. ಮೃತಳನ್ನು ವಹಿನೂರ್ ಎಂದು ಗುರುತಿಸಲಾಗಿದ್ದು, ಘಟನೆಯ ತೀವ್ರತೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಅವಘಡದಲ್ಲಿ ಸುಹೇಲ್, ಕೌಸರ್, ಅಯಾಜ್ ಹಾಗೂ ಅಬ್ಜರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯ ದುರಸ್ಥಿತಿ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಘಟನೆ ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *