ಚಿಕ್ಕಬಳ್ಳಾಪುರ: ಜೂಜಾಡಲು ಪತ್ನಿ ಹಣ ಕೊಡದ ಹಿನ್ನೆಲೆಯಲ್ಲಿ ಬೇಸರಗೊಂಡ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಲ್ಲಿನ ಎಚ್ಎಸ್ ಗಾರ್ಡ್ನ್ನಲ್ಲಿರುವ ಕಿಶೋರ್ (38) ಮೃತ. ಜೂಜಾಡಲು ಹಣ ಕೇಳಿದಾಗ ಪತ್ನಿ ನಿರಾಕರಿಸಿದ್ದಾಳೆ. ಈ ವೇಳೆ ಕಿಶೋರ್ ಹಣ ಕೊಡದಿದ್ದರೆ ಆತ್ಮಹತ್ಯೆ ಶರಣಾಗುವುದಾಗಿ ಬೆದರಿಸಿದ್ದಾನೆ. ಆದರೆ, ಅದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಬೇಸರಗೊಂಡು ವಿಷ ಸೇವಿಸಿದ್ದಾನೆ. ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

