ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025 ಆ.17ರಂದು ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು ಪ್ರಕರಣದ ಆರೋಪಿ ಕೇರಳ ಮೂಲದ ಸತೀಶ್ (45) ಎಂಬಾತನಿಗೆ ಸುಳ್ಯ ನ್ಯಾಯಾಲಯವು ಕಲಂ 331(4) ಬಿಎನ್‌ಎಸ್ ರಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ 500 ರೂ.ದಂಡ, ಕಲಂ 305 ಬಿಎನ್‌ಎಸ್ ರಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ 500 ರೂ. ದಂಡ. ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದೆ. ಪಿ.ಎಸ್.ಐ ಕಾರ್ತಿಕ್ ಅವರು ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ಸಹಾಯಕ ಸರಕಾರಿ ಅಭಿಯೋಜಕಿ ಪ್ರೀತಿ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

