Breaking News

ತಂಗಿಯನ್ನು ವರಿಸಿದ 40 ವರ್ಷದ ವರನ ತಾಯಿಗೆ ಬೆಂಕಿ ಹಚ್ಚಿದ ಅಣ್ಣ

ಚಿಕ್ಕಬಳ್ಳಾಪುರ: ತನ್ನ 20 ವರ್ಷದ ತಂಗಿಯನ್ನು 40 ವರ್ಷದ ವ್ಯಕ್ತಿಯೊಬ್ಬ ಪ್ರೀತಿಸಿ ವಿವಾಹ ಆಗಿದ್ದಕ್ಕೆ ಕೋಪಗೊಂಡ ಯುವತಿಯ ಅಣ್ಣ, ತನ್ನ ಸ್ನೇಹಿತರ ಜತೆ ಸೇರಿ ವಿವಾಹವಾದ ವ್ಯಕ್ತಿಯ ತಾಯಿಯನ್ನು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಲಕ್ಷ್ಮೀದೇವಮ್ಮ ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ನವೀನ್ ಎಂದು ಗುರುತಿಸಲಾಗಿದೆ. ನವೀನ್ ಸ್ನೇಹಿತರ ಜತೆ ಮಾ.20 ರಂದು ಪುರುಷೋತ್ತಮ್ ಅವರ ತಾಯಿಯ ಮನೆ ಮೇಲೆ ದಾಳಿ ನಡೆಸಿ ಕೃತ್ಯ ಎಸಗಿದ್ದ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಮವಾರ ಮೃತ್ಟಟಿದ್ದರು. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *