Breaking News

ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶಿಕಾಂತ್ ಶೆಟ್ಟಿ (44) ಎಂಬಾತನ ಮೇಲಿನ ಆರೋಪಗಳು 10 ವರ್ಷಗಳ ನಂತರ ಸಾಬೀತಾಗಿದ್ದು, ಕುಂದಾಪುರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣ ದಾಖಲಾದ ನಂತರ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ಕುಂದಾಪುರ ಗ್ರಾಮಾಂತರ ಪೊಲೀಸರು ಮಾರ್ಚ್ 1 ರಂದು ಪಶ್ಚಿಮ ಬಂಗಾಳದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಯ ಪತ್ನಿ ನೀಡಿದ ದೂರಿನ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೀರ್ಘಕಾಲದ ವಿಚಾರಣೆಯ ನಂತರ ಇದೀಗ ಕೋರ್ಟ್ ಆರೋಪಿಗೆ ಶಿಕ್ಷೆ ಪ್ರಕಟಿಸಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *