Breaking News

ತಲಪಾಡಿ : ಅಕ್ರಮ ಇ-ಸಿಗರೇಟ್ ಸಂಗ್ರಹ; ಆರೋಪಿ ಬಂಧನ

ಉಳ್ಳಾಲ: ತಲಪಾಡಿ ಗ್ರಾಮದ ಮೇಲಿನ ತಲಪಾಡಿ ಪ್ರದೇಶದಲ್ಲಿರುವ ಮನೆಯೊಂದರ ಮುಂಭಾಗದಲ್ಲಿ ಬಿಳಿ ಗೋಣಿ ಚೀಲದಲ್ಲಿ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನವಾಝ್ ಬಂಧಿತ ಆರೋಪಿ. ಉಳ್ಳಾಲ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಿದ್ದಪ್ಪ ನರನೂರ ಅವರ ನೇತೃತ್ವದಲ್ಲಿ ಬುಧವಾರ ರಾತ್ರಿ ವೇಳೆ ದಾಳಿ ನಡೆಸಲಾಗಿದೆ. ಆರೋಪಿ ನವಾಝ್ ವಶದಲ್ಲಿದ್ದ ವಿವಿಧ ಕಂಪನಿಗಳ ನಿಷೇಧಿತ ಇ-ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 37,000 ರೂ. ಮೌಲ್ಯದ ಇ-ಸಿಗರೇಟ್‌ಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಸಂಬಂಧಿತ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *