ತುಮಕೂರು: ಹೈನುಗಾರಿಕೆಯಲ್ಲಿ ನಷ್ಟ ಉಂಟಾಗಿ ವಿಪರೀತ ಸಾಲ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಟಗೆರೆ ತಾಲೂಕಿನ ಜೋನಿಗರಹಳ್ಳಿಯಲ್ಲಿ ನಡೆದಿದೆ. ರಮೇಶ್(49) ಆತ್ಮಹತ್ಯೆ ಮಾಡಿಕೊಂಡವರು. ಕೃಷಿಯೊಂದಿಗೆ ಹೈನುಗಾರಿಕೆ ಮಾಡಲು ಮೈಕ್ರೋ ಫೈನಾನ್ಸ್ ಸೇರಿದಂತೆ ವಿವಿಧೆಡೆ ಸುಮಾರು 8 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಮೂರ್ನಾಲ್ಕು ವರ್ಷಗಳಿಂದ ಪತ್ನಿ ಹಾಗೂ ತಮ್ಮ ಹೆಸರಲ್ಲಿ ಅವರು ಸಾಲ ಪಡೆದು 20 ಹಸುಗಳನ್ನು ಸಾಕುತ್ತಿದ್ದರು. ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ರಮೇಶ್ ಅವರಿಗೆ ಸೇರಿದ 15 ಹಸುಗಳು ಮಾರಣಾಂತಿಕ ಕಾಯಿಲೆ ಮತ್ತು ರೋಗಗಳ ಕಾರಣ ಸಾವನಪ್ಪಿವೆ. ಇದರ ಪರಿಣಾಮ ಸಾಲದ ಕಂತುಗಳನ್ನು ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋನಿಗರಹಳ್ಳಿ ಗ್ರಾಮದ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

