Breaking News

ಕಾರು-ಮಿನಿ ಬಸ್‌ ನಡುವೆ ಅಪಘಾತ; ಮಹಿಳೆ ಸ್ಥಳದಲ್ಲೇ ಮೃತ್ಯು

ವಿಜಯಪುರ : ಮಿನಿ ಬಸ್‌ ಮತ್ತು ಮಾರುತಿ ಸುಜುಕಿ ಎರಟಿಗಾ ವಾಹನದ ಮಧ್ಯೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮುದ್ದೇಬಿಹಾಳ ನಿಡಗುಂದಿ ರಸ್ತೆಯಲ್ಲಿ ಬರುವ ಮಾದಿನಾಳ ಕ್ರಾಸ್ ಹತ್ತಿರ ಈ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ ಕಸ್ತೂರಿಬಾಯಿ ಕೃಷ್ಣ ರಾಠೋಡ(50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಜಯ ಜೈನ್ ಸುರಪುರ, ಗುರಪ್ಪ ಚೌವ್ಹಾನ್ ಚಲಮಿತಾಂಡ ಎಂಬವರು ಗಂಭೀರ ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಮುದ್ದೇಬಿಹಾಳದಿಂದ ನಿಡಗುಂದಿ ಕಡೆ ಹೊರಟ ಬಸ್‌, ನಿಡಗುಂದಿಯಿಂದ ಮುದ್ದೇಬಿಹಾಳ ಕಡೆ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿಯಾಗಿವೆ. ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಮಹಮ್ಮದ್ ಫಸಿಯುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಸ್.ಬಂಗಿ, ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.‌ ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *