ದಾವಣಗೆರೆ: ಉಪಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದ ಅಧಿಕಾರಿಗಳು, ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹6.17 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾರಿಗನೂರ, ಮಾಗಾನಹಳ್ಳಿ ಮತ್ತು ಭೂಮಿಕಾ ನಗರ ಚೆಕ್‌ಪೋಸ್ಟ್‌ಗಳಲ್ಲಿ ವಿಶೇಷ ತಪಾಸಣೆ ಕೈಗೊಳ್ಳಲಾಗಿತ್ತು. ಈ ವೇಳೆ ಸಂಶಯಾಸ್ಪದವಾಗಿ ಸಾಗಿಸುತ್ತಿದ್ದ ನಗದು ಪತ್ತೆಯಾಗಿದೆ. ಭೂಮಿಕಾ ನಗರ ಚೆಕ್‌ಪೋಸ್ಟ್‌ನಲ್ಲಿ ಜಯನಗರದ ಪವನಕುಮಾರ್ ಅವರಿಂದ ₹4 ಲಕ್ಷ, ಕಾರಿಗನೂರ ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ ಪ್ರಕಾಶ ಮರುಳಸಿದ್ದ ಅವರಿಂದ ₹1.15 ಲಕ್ಷ ಹಾಗೂ ಮಾಗಾನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಚಿತ್ತಾನಹಳ್ಳಿಯ ಸೇಲ್ವಂ ಅವರಿಂದ ₹1.12 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ತಪಾಸಣೆ ವೇಳೆ ವಾಹನಗಳನ್ನು ತಡೆದು ಹಣದ ಮೂಲ ಕುರಿತು ದಾಖಲೆಗಳನ್ನು ಕೇಳಲಾಗಿತ್ತು. ಆದರೆ ಸೂಕ್ತ ದಾಖಲೆಗಳನ್ನು ನೀಡಲು ವಿಫಲವಾದ ಹಿನ್ನೆಲೆ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

