Breaking News

ಅಗ್ನಿ ಅವಘಡ – ಲುಲು ಮಾಲ್ ಎದುರು ಹೊತ್ತುರಿದ ಸಾರಿಗೆ ಬಸ್.!

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಲುಲು ಮಾಲ್ ಮುಂಭಾಗದ ರಸ್ತೆಯಲ್ಲಿ ಗುರುವಾರ ಭೀಕರ ಅನಾಹುತವೊಂದು ಸಂಭವಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬಸ್ ಸಂಪೂರ್ಣವಾಗಿ ಧಗಧಗನೆ ಹೊತ್ತಿ ಉರಿದಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಬಸ್ ಚಲಿಸುತ್ತಿದ್ದ ವೇಳೆಯೇ ಇಂಜಿನ್ ಭಾಗದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸುವ ಮುನ್ನವೇ ಅದರಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಇದರಿಂದಾಗಿ ದೊಡ್ಡ ಪ್ರಾಣಾಪಾಯ ತಪ್ಪಿದೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಬಹುತೇಕ ಸುಟ್ಟು ಭಸ್ಮವಾಗಿದ್ದು, ದಟ್ಟವಾದ ಹೊಗೆ ಆವರಿಸಿದ್ದರಿಂದ ಮೆಜೆಸ್ಟಿಕ್ ಮತ್ತು ಓಕಳಿಪುರಂ ಭಾಗದ ರಸ್ತೆಗಳಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪ್ರಾಥಮಿಕ ಮಾಹಿತಿಯ ಪ್ರಕಾರ ಇಂಜಿನ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಕುರಿತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *