ಹಾಸನದಲ್ಲಿ ಪ್ರಿವೆಡಿಂಗ್ ಶೂಟ್ ಗೆ ತೆರಳಿದ ಫೋಟೋಗ್ರಾಫರ್ಸ್ ಮೇಲೆ ಹಲ್ಲೆ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯ ಬಳಿ ಈ ಒಂದು ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯದ ಬಳಿ ಪ್ರಿವೆಡ್ಡಿಂಗ್ ಶೂಟ್ ಮಾಡುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ಅಡ್ಡಿ ಮಾಡಿದ್ದಾರೆ. ದೇವಾಲಯ ಆವರಣದಲ್ಲಿ ಫೋಟೋಶೂಟ್ ಮಾಡುತ್ತಿದ್ದಕ್ಕೆ ಅಡ್ಡಿ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಫೋಟೋಗ್ರಾಫರ್ಸ್ ಮೇಲೆ ಹಲ್ಲೆ ಮಾಡಿದ್ದಾರೆ. ಫೋಟೋಗ್ರಾಫರ್ ಯಶ್ ಸೇರಿದಂತೆ ಹಲವರ ಮೇಲೆ ಹಲ್ಲಿ ನಡೆದಿದೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಫೋಟೋಗ್ರಾಫರ್ಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

