Breaking News

ಕೆಲಸಕ್ಕಿದ್ದ ಮನೆಯಲ್ಲೇ ನಗದು, ಚಿನ್ನಕದ್ದು ಸಿಕ್ಕಿಬಿದ್ದ ಮಹಿಳೆಯ ಬಂಧನ

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಕಳ್ಳತನ ಮಾಡುತ್ತಿದ್ದ ಮನೆ ಕೆಲಸದಾಕೆ ಜೆ.ಪಿ.ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಬಂಧಿತ ಆರೋಪಿತೆಯಿಂದ 2.25 ಲಕ್ಷ ರೂ.ನಗದು, 22.5 ಗ್ರಾಂ ಚಿನ್ನಾಭರಣ ಸೇರಿ ಒಟ್ಟು 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈಕೆ ಜೆ.ಪಿ.ನಗರ 2ನೇ ಹಂತದ 17ನೇ ಮುಖ್ಯ ರಸ್ತೆ ನಿವಾಸಿಯೊಬ್ಬರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಕೊಠಡಿಯ ಬೀರುವಿನಲ್ಲಿದ್ದ 3.20 ಲಕ್ಷ ರೂ.ನಗದು ಹಾಗೂ 39 ಗ್ರಾಂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಳು. ಆದರೆ, ಈ ವಿಚಾರ ಮಾಲಿಕರ ಗಮನಕ್ಕೆ ಬಂದಿರಲಿಲ್ಲ. ಮಾ.14ರಂದು ಮಾಲಿಕರು ಹಣದ ಅವಶ್ಯಕತೆ ಇದ್ದ ಹಿನ್ನೆಲೆಯಲ್ಲಿ ಬೀರು ತೆಗೆದು ನೋಡಿದಾಗ ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ಕಳವಾಗಿರುವುದು ಇವರ ಗಮನಕ್ಕೆ ಬಂದಿತ್ತು. ಈ ಬಗ್ಗೆ ಜೆ.ಪಿ.ನಗರ ಠಾಣೆ ಪೊಲೀಸರು ದೂರು ನೀಡಿದ್ದರು. ಮನೆಗೆಲಸದಾಕೆ ವಾಸವಾಗಿದ್ದ ಜಯನಗರ 9ನೇ ಬ್ಲಾಕ್‌ನ ಮನೆಯಿಂದ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರುವುದಾಗಿ ಆಕೆ ತಿಳಿಸಿದ್ದಳು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *