Breaking News

ಮೈಸೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 25ಕೆಜಿಗೂ ಅಧಿಕ ಸಿಂಥೆಟಿಕ್ ಡ್ರಗ್ಸ್ ಜಪ್ತಿ, ಓರ್ವ ಅರೆಸ್ಟ್!

ಮೈಸೂರು ಜಿಲ್ಲೆಯಲ್ಲಿ 25 ಕೆಜಿಗು ಅಧಿಕ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ. ದಾಸನಪುರ ರತ್ನಪುರಿ ಮಾರ್ಗ ಮಧ್ಯದ ತೋಟದಲ್ಲಿ 25 ಕೆಜಿಗೆ ಅಧಿಕ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ. ಹುಣಸೂರು ತಾಲೂಕಿನ ದಾಸನಪುರ ಮತ್ತು ರತ್ನಪುರಿ ಮಾರ್ಗ ಮಧ್ಯೆ ಇರುವ ತೋಟದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಇರ್ಫಾನ್ ಎಂಬುವವರ ತೋಟದ ಮೇಲೆ ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ 25 ಕೆಜಿ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ತೋಟದ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ತೋಟದ ಮಾಲೀಕ ಇರ್ಫಾನನನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಕಾರ್ಯಾಚರಣೆ ವೇಳೆ ಕೆಲವು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿ ಆದವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *