Breaking News

ಮದ್ದೂರು: ಶಾಲಾ ಬಸ್‌ ಹಾಗೂ ಖಾಸಗಿ ಬಸ್ ನಡುವೆ ಅಪಘಾತ; 12 ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ಶಾಲಾ ಬಸ್‌ ಹಾಗೂ ಖಾಸಗಿ ಬಸ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಬೆಳಿಗ್ಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸೋಮನಹಳ್ಳಿ ಗ್ರಾಮದ ಬಳಿ ಖಾಸಗಿ ಬಸ್‌ ಹಾಗೂ ಶಾಲಾ ಬಸ್‌ ನಡುವೆ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮಂಡ್ಯ ಜಿಲ್ಲಾಧಿಕಾರಿ (DC) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಗಾಯಾಳು ವಿದ್ಯಾರ್ಥಿಗಳಿಗೆ ಸೂಕ್ತ ಹಾಗೂ ತುರ್ತು ಚಿಕಿತ್ಸೆ ನೀಡುವಂತೆ ವೈದ್ಯಕೀಯ ಸಿಬ್ಬಂದಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *