ಬೆಳ್ತಂಗಡಿ: ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆಂಜದ ಮುರದಮೇಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಕೋಳಿ ಅಂಕ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರ ನೇತೃತ್ವದ ಎಎಸ್‌ಐ ಪೌಲೋಸ್ ತಂಡದ ಸಿಬಂದಿ ದಾಳಿ ನಡೆಸಿ, ಪ್ರಶಾಂತ್, ಶಶಿಕುಮಾರ್, ಹೊನ್ನಪ್ಪ ಗೌಡ, ಜನಾರ್ದನ ಎಂಬವರನ್ನು ವಶಕ್ಕೆ ಪಡೆದು ಅವರಿಂದ ಜೂಜಾಟಕ್ಕೆ ಉಪಯೋಗಿಸಿದ 2,250 ರೂ. ನಗದು ಹಾಗೂ 14 ಕೋಳಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸೊತ್ತು ಹಾಗೂ ಕೋಳಿಯ ಒಟ್ಟು ಮೌಲ್ಯ 9,000 ರೂ. ಆಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

