ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡೀಪಾರು ಆದೇಶ ಹೊರಡಿಸಲಾಗಿದೆ. ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಸುಹಾನ್ ಪೂಜಾರಿ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ಮಾ.26ರಂದು ಗಡೀಪಾರು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಮಹಮ್ಮದ್ ನೌಫಿಲ್ ಮೇಲೆ 5 ಪ್ರಕರಣಗಳು ದಾಖಲಾಗಿದ್ದು, ಶಿರ್ವ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಸುಹಾನ್ ಪೂಜಾರಿ ವಿರುದ್ಧ 4 ಪ್ರಕರಣಗಳು ದಾಖಲಾಗಿವೆ. ಮಹಮ್ಮದ್ ನೌಫಿಲ್ ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣೆ ವ್ಯಾಪ್ತಿಗೆ ಮತ್ತು ಸುಹಾನ್ ಪೂಜಾರಿಯನ್ನು ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

