ಕುಂದಾಪುರ: ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ.ಮಮತಾ (36), ಅವರ ಪುತ್ರಿ ದೃತಿಕಾ (14) ಮೃತರು. ಮಮತಾ ಅವರ ಪತಿ ನೆಲಮಂಗಲ ನಿವಾಸಿ ರಾಘು, ಪುತ್ರಿ ಜಾಹ್ನವಿ, ಕಾರಿನಲ್ಲಿದ್ದ ಚಾರ್ವಿ, ಕಿರಣ್ ಅವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರೆಲ್ಲರೂ ಕಾರಿನಲ್ಲಿ ಬೆಂಗಳೂರಿನಿಂದ ಉಡುಪಿಗೆ ಆಗಮಿಸಿ ಗೋಕರ್ಣದತ್ತ ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Check Also
ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!
ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …
bigtvnews | Hubli Dharwad News | Kannada News | Karnataka News Hubli News | News In Hubli | Local news

