Breaking News

ಗಾಂಜಾ ಸೇವನೆ, ಇಬ್ಬರು ಯುವಕರ ಬಂಧನ

ಹುಣಸೂರು: 2 ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಹುಣಸೂರು-ರತ್ನಪುರಿ ರಸ್ತೆಯ ಸಲೀಂ ಪ್ಯಾಲೆಸ್ ಎದುರಿನ ಟೀ ಅಂಗಡಿ ಬಳಿ ಹಾಗೂ ಶಬ್ಬೀರ್‌ ನಗರದ ರಜಾಕ್ ಮೊಹಲ್ಲಾದ ಶಾದಿ ಮಹಲ್ ಬಳಿ ಯುವಕರು ಗಾಂಜಾ ಸೇವಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ರವಿ ಮತ್ತು ಇನ್ಸ್ ಪೆಕ್ಟರ್ ಸಂತೋಷ್ ಕಶ್ಯಪ್ ಮಾರ್ಗದರ್ಶನದಲ್ಲಿ ಎಸ್.ಐ.ತಾಜುದ್ದೀನ್ ಟಿ.ಎಂ. ನೇತೃತ್ವದ ತಂಡ ದಿಡೀರ್ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಡಿವೈಎಸ್‌ಪಿ ರವಿ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *