Breaking News

ಸ್ಕಿಡ್ ಆಗಿ ಬಿದ್ದ ಬೈಕ್ ; ಲಾರಿ ಹಿಂಬದಿ ಚಕ್ರಕ್ಕೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು

ಕುಣಿಗಲ್: ಬೈಕ್ ಸ್ಕಿಡ್ ಆಗಿ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಹಿಂಬದಿಯ ಚಕ್ರ ಸವಾರನ ಮೇಲೆ ಹರಿದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮಹಿಳೆ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ಹೇರೂರು ಬೈಪಾಸ್ ಬಳಿ ಮಾ.29ರ ರವಿವಾರ ಬೆಳಗ್ಗೆ ಸಂಭವಿಸಿದೆ. ಮಂಗಳೂರು ಬ್ರಹ್ಮವರಂ ನಿವಾಸಿ ಮಹಮದ್ ಷರೀಫ್ (60) ಮೃತರು. ಇವರ ಪತ್ನಿ ಅಸೀನಾ ಭಾನು ತೀವ್ರವಾಗಿ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಮದ್ ಷರೀಫ್ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದು ತನ್ನ ಸ್ವಗ್ರಾಮ ಮಂಗಳೂರು ಬ್ರಹ್ಮವರಂಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೇಗೂರು ಬೈಪಾಸ್ ಬಳಿ ಬೈಕ್ ಸ್ಕಿಡ್ ಆಗಿ ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿದ ಪರಿಣಾಮ ಲಾರಿ ಚಕ್ರ ಬೈಕ್ ಸವಾರನ ಮೇಲೆ ಹರಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕುಣಿಗಲ್ ವೃತ್ತ ನಿರೀಕ್ಷಕ ಮಾದ್ಯ ನಾಯ್ಕ್ ಬೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *