Breaking News

ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ.. ಮೂವರು ವಿದ್ಯಾರ್ಥಿಗಳು ದುರ್ಮರಣ!

ಬೆಂಗಳೂರು : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟೂ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮನೋಜ್( 21), ಅಭಿ (21), ನವೀನ್( 22)ಮೃತ ವಿದ್ಯಾರ್ಥಿಗಳು. ಈ ಮೂವರು ಬೆಂಗಳೂರಿನ ಆಚಾರ್ಯ ಮತ್ತು ಸಪ್ತಗಿರಿ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದರು ಎಂದು ತಿಳಿದುಬಂದಿದೆ. ಮೂವರು ನಿನ್ನೆ ರಾತ್ರಿ ಮಳವಳ್ಳಿ ಬಿರಿಯಾನಿಗಾಗಿ ಬೈಕ್ ರೈಡ್ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂದೆ ಮೃತರ ಸ್ನೇಹಿತರ ಹಾಗೂ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *