ಶಿವಮೊಗ್ಗ: ಕಾಲೇಜು ಉಪನ್ಯಾಸಕರೊಬ್ಬರ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ನಡೆದಿದೆ. 58 ವರ್ಷದ ಸುರೇಶ್ ಮೃತ ಉಪನ್ಯಾಸಕ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಅವರದ್ದೇ ತೋಟದಲ್ಲಿ ಶವ ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಕಂಡು ಅಕ್ಕಪಕ್ಕದ ತೋಟದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೃತದೇಹ ಭಾಗಶಃ ಸುಟ್ಟು ಹೋಗಿತ್ತು. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

