Breaking News

ಕೊಡಿಗೆಹಳ್ಳಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಕೊಡಿಗೆಹಳ್ಳಿ ಫ್ಲೈಓವರ್ ಮೇಲೆ ಇಂದು ಬೆಳಗ್ಗೆ ಸುಮಾರು 6 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದೇವನಹಳ್ಳಿ ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಬೈಕ್ ಸವಾರ ವೇಗವಾಗಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕನ್ಸ್ಟ್ರಕ್ಷನ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ತೀವ್ರತೆಗೆ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *