Breaking News

ಶಿವಮೊಗ್ಗ: ಭೀಕರ ಅಪಘಾತ… ಹೋಟೆಲ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ದಂಪತಿಯ ದಾರುಣ ಅಂತ್ಯ

ಶಿವಮೊಗ್ಗ: ಜೋಳ ತುಂಬಿದ್ದ ‌ಲಾರಿಯ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿ ಬರುತ್ತಿದ್ದ ದಂಪತಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ.ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ತರೀಕೆರೆ ತಾಲ್ಲೂಕಿನ ಬರಗೇನಹಳ್ಳಿ ಗೌಳಿಕ್ಯಾಂಪ್ನ ಬಾಬು (30) ಎಂದು ಗುರುತಿಸಲಾಗಿದೆ. ಪತ್ನಿ ಹೆಸರು ತಿಳಿದುಬಂದಿಲ್ಲ. ಜೋಳ ತುಂಬಿದ್ದ ಲಾರಿಯು ಶಿವಮೊಗ್ಗ ತರೀಕೆರೆ ಮಾರ್ಗವಾಗಿ ಹೊರಟಿದ್ದು, ದಂಪತಿ ಸಹ ಹೋಟೆಲ್ ಕೆಲಸ ಮುಗಿಸಿಕೊಂಡು ಬರುವಾಗ ಲಾರಿ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾರೆ. ಬಾಬು ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಓವರ್ ಟೇಕ್ ಭರದಲ್ಲಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *