ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಆಕೆಯ ಪರಿಚಿತನ ಜತೆ ಇದ್ದಾಗ ಫೋಟೋ ತೆಗೆದು ಅನಂತರ ಬಾಲಕಿಯನ್ನು ಹಿಂಬಾಲಿಸಿ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ 2 (ಪೊಕ್ಸೊ ನ್ಯಾಯಾಲಯದ)ದ ನ್ಯಾಯಾಧೀಶ ಮಾನು ಕೆ.ಎಸ್. ಒಟ್ಟಾರೆ 4 ವರ್ಷ, 6 ತಿಂಗಳು ಕಠಿನ ಸಜೆ, ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಬಜಪೆ ಶಾಂತಿಗುಡ್ಡೆ ನಿವಾಸಿ ಮೊಹಮ್ಮದ್ ಸಫ್ವಾನ್ ಆಲಿಯಾಸ್ ಸಫ್ವಾನ್ (32) ಶಿಕ್ಷೆಗೊಳಗಾದ ಆರೋಪಿ. ದಂಡದ ಮೊತ್ತದಿಂದ 20,000 ರೂ. ಹಾಗೂ ಹೆಚ್ಚುವರಿ 30,000 ರೂ.ಗಳನ್ನು ಸಂತ್ರಸ್ತೆ ಬಾಲಕಿಗೆ ಪರಿಹಾರವಾಗಿ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿ ಸಾಕ್ಷ್ಯ ವಿಚಾರಣೆ ನಡೆಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

