Breaking News

ಬೆಂಗಳೂರಿಗೆ ಹುಲಿ ಉಗುರು ಸಾಗಣೆ: ಕೊಳ್ಳೇಗಾಲದ ವ್ಯಕ್ತಿಯ ಬಂಧನ

ಕೊಳ್ಳೇಗಾಲ(ಚಾಮರಾಜನಗರ ಜಿಲ್ಲೆ): ಕಾರಿನಲ್ಲಿ 2 ಹುಲಿ ಉಗುರುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ತಾಲ್ಲೂಕಿನ ಜಾಗೇರಿ ಗ್ರಾಮದ ಚಂದ್ರು ಎನ್ನುವವರನ್ನು ಅ‍ಪರಾಧ ಪತ್ತೆ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯು ಉಗುರುಗಳನ್ನು ಬೆಂಗಳೂರಿಗೆ ಸಾಗಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆದಿದೆ. ಸಿಬ್ಬಂದಿ ಎಎಸ್ ತಕೀವುಲ್ಲಾ, ರವಿಕುಮಾರ್, ವೆಂಕಟೇಶ್, ಜಡೇಗೌಡ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಕಾಳ ಸಂತೆಯಲ್ಲಿ ಮಾರುವ ಸಲುವಾಗಿ ಹೋಗುತ್ತಿದ್ದೇನೆ ಎಂದು ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು. ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *