Breaking News

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ಹೊಸಗಂಗಡಿ ಗ್ರಾಮದ ಜಿನ್ನಪ್ಪ ಎಂಬುವವರ ಪತ್ನಿ, ಸೇಸಮ್ಮ (58) ಅವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಅವರು ಸಾವನ್ನಪ್ಪಿದ್ದಾರೆ. ಮಾ.17 ರಂದು ರಾತ್ರಿ ಸೇಸಮ್ಮ ಅವರು ಮನೆ ಬಳಿಯ ಸೋಲಾರ್‌ ಶೆಡ್‌ನಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು.ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ ಲಾಕ್‌ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಮಗ ರಾಘವೇಂದ್ರ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *